ದಾಖಲೆಯ ಲ್ಯಾಮಿನೇಷನ್ ವೇಳೆ ಉಂಟಾದ ಹಾನಿ ಹಾಗೂ ಬಳಿಕ ನಡೆದ ಬೆಳವಣಿಗೆಗಳನ್ನು ಆಧರಿಸಿ ಪುತ್ತೂರಿನಲ್ಲಿ ಉಂಟಾಗಿರುವ ಉದ್ವಿಗ್ನ ವಾತಾವರಣದ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸೌಹಾರ್ದ ಕಾಪಾಡುವ ಉದ್ದೇಶದಿಂದ ‘ಪುತ್ತೂರು ಸೌಹಾರ್ದ ಚಲೋ’ ಆಯೋಜಿಸಲು ದಕ್ಷಿಣ ಕನ್ನಡ...
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಆಯೋಜಿಸಲು ಸಿದ್ಧತೆಗಳು ಚುರುಕುಗೊಂಡಿವೆ. ನಗರದ ಸಾತಗಳ್ಳಿಯಲ್ಲಿರುವ ಸೈಕ್ಲಿಂಗ್ ವೆಲೋಡೋಮ್ಗಾಗಿ ಮೀಸಲಿಟ್ಟ ಜಾಗದಲ್ಲಿ ಕಂಬಳದ ಟ್ರ್ಯಾಕ್ (ಕರೆ) ನಿರ್ಮಾಣ ಕಾರ್ಯಕ್ಕೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ...
ತನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಾರೆಂಬ ನಂಬಿಕೆಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಮಗನ ಹೆಸರಿಗೆ ಬರೆದುಕೊಟ್ಟಿದ್ದ 92 ವರ್ಷದ ವಯೋವೃದ್ಧರೊಬ್ಬರು, ಮಗನ ದ್ರೋಹದ ವಿರುದ್ಧ ಕಾನೂನು ಹೋರಾಟ ನಡೆಸಿ ವಿಜಯಶಾಲಿಯಾಗಿದ್ದಾರೆ. ಈ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು...
ವಿದ್ಯಾಭಾರತಿ ಜಿಲ್ಲಾಮಟ್ಟದ ಯೋಗ ಸ್ಪರ್ಧೆ ಕೆಪಿಎಸ್ ಸ್ಕೂಲ್ ಪಂಜಿನಡ್ಕ ಮುಲ್ಕಿ ಇಲ್ಲಿ ನಡೆಯಿತು . ಈ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ತಂಡ ಪ್ರಶಸ್ತಿ ಯನ್ನು ಪಡೆದುಕೊಂಡಿರುತ್ತದೆ. ವಿದ್ಯಾಭಾರತಿ ಜಿಲ್ಲಾಮಟ್ಟದ ಯೋಗ...
ಗ್ರಾಮೀಣ ಬದುಕಿನ ಸೊಗಡು, ಸಂಸ್ಕೃತಿ ಹಾಗೂ ಸಾಂಪ್ರದಾಯಿಕ ಕ್ರೀಡೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಮೂಡಂಗಲ್ ಫ್ರೆಂಡ್ಸ್, ಧರ್ಮಸ್ಥಳ ಇವರ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ‘ಕೆಸರ್ಡ್ ಒಂಜಿ ದಿನ’ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಧರ್ಮಸ್ಥಳ: ಗ್ರಾಮೀಣ ಬದುಕಿನ ಸೊಗಡು, ಸಂಸ್ಕೃತಿ ಹಾಗೂ ಸಾಂಪ್ರದಾಯಿಕ ಕ್ರೀಡೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಮೂಡಂಗಲ್ ಫ್ರೆಂಡ್ಸ್, ಧರ್ಮಸ್ಥಳ ಇವರ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ‘ಕೆಸರ್ಡ್ ಒಂಜಿ ದಿನ’ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಕೆಸರ್ಡ್ ಒಂಜಿ ದಿನದಂತಹ ಕಾರ್ಯಕ್ರಮಗಳು ಗ್ರಾಮೀಣ ಬದುಕಿನ ಸೊಗಡು, ಕೃಷಿ ಸಂಸ್ಕೃತಿ ಮತ್ತು ನಮ್ಮ ಪರಂಪರಾಗತ ಕ್ರೀಡೆಗಳನ್ನು ಹೊಸ ಪೀಳಿಗೆಗೆ ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಮಣ್ಣಿನೊಂದಿಗೆ ಮನುಷ್ಯನಿಗಿರುವ ಅವಿನಾಭಾವ ಸಂಬಂಧವನ್ನು ಇಂತಹ ಕಾರ್ಯಕ್ರಮಗಳು ಮತ್ತಷ್ಟು ಗಟ್ಟಿಗೊಳಿಸುತ್ತವೆ. ಯುವಜನರು ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಅರಿತು ಅವುಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕು” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಕ್ಕಳು, ಮಹಿಳೆಯರು ಹಾಗೂ ಪುರುಷರು ಸೇರಿದಂತೆ ವಿವಿಧ ವಯೋಮಾನದವರು ಉತ್ಸಾಹದಿಂದ ಭಾಗವಹಿಸಿದರು. ಕೆಸರುಗದ್ದೆಯಲ್ಲಿ ಆಯೋಜಿಸಲಾದ ವಿವಿಧ ಗ್ರಾಮೀಣ ಹಾಗೂ ಸಾಂಪ್ರದಾಯಿಕ ಕ್ರೀಡಾಸ್ಪರ್ಧೆಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು. ಕೆಸರಿನಲ್ಲಿ ಆಟವಾಡುತ್ತಾ ಸ್ಪರ್ಧಿಗಳು ಪ್ರದರ್ಶಿಸಿದ ಉತ್ಸಾಹ, ಚುರುಕುತನ ಮತ್ತು ಕ್ರೀಡಾಸ್ಫೂರ್ತಿ ನೆರೆದಿದ್ದವರನ್ನು ರಂಜಿಸಿತು. ಗ್ರಾಮೀಣ ಕ್ರೀಡೆಗಳ ಮೂಲಕ ಹಳೆಯ ಕಾಲದ ಕೃಷಿ ಬದುಕು ಮತ್ತು ಜನಪದ ಸಂಸ್ಕೃತಿಯನ್ನು ನೆನಪಿಸುವುದರ ಜೊತೆಗೆ, ಪರಸ್ಪರ ಬಾಂಧವ್ಯ ಹಾಗೂ ಸಾಮರಸ್ಯವನ್ನು ಬೆಳೆಸುವ ವೇದಿಕೆಯಾಗಿಯೂ ಕಾರ್ಯಕ್ರಮ ಮೂಡಿಬಂತು. ಸ್ಥಳೀಯರು ಹಾಗೂ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರುಗು ತಂದರು. ಈ ಸಂದರ್ಭದಲ್ಲಿ ಧರ್ಮಸ್ಥಳ ದೇವಸ್ಥಾನದ ಪಾರುಪತ್ಯಗಾರ್ ಪಿ. ಲಕ್ಷ್ಮೀನಾರಾಯಣ ರಾವ್, ಅನ್ನಪೂರ್ಣ ಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಸಾದ್, ವಕೀಲ ಕೇಶವ ಬೆಳಾಲ್, ಪ್ರಭಾಕರ ಪೂಜಾರಿ, ಉದಯ್ ಕುಮಾರ್, ಗ್ರಾಮ ಪಂಚಾಯತ್ ಮಾಜಿ ಸದಸ್ಯರುಗಳಾದ ಮುರಳೀಧರ ದಾಸ್, ಹರ್ಷತ್ ಜೈನ್, ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ನೇಪಾಳದ ಭೋಟೆಕೋಶಿ ನದಿಯಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹವು ಭಾರಿ ಅವಾಂತರ ಸೃಷ್ಟಿಸಿದ್ದು, ಸಾವಿನ ಸಂಖ್ಯೆ 157ಕ್ಕೆ ಏರಿಕೆಯಾಗಿದೆ. ಪ್ರವಾಹದ ಅಬ್ಬರಕ್ಕೆ ಸಿಲುಕಿ ಸುಮಾರು 350ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಓಮ್ನಿ ಕಾರು ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಅಂತರರಾಜ್ಯ ಕಳ್ಳತನದಲ್ಲಿ ತೊಡಗಿದ್ದ...
ಸುಮಾರು 13 ವರ್ಷಗಳ ಹಿಂದೆ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸೌಜನ್ಯ ಅವರ ನಿವಾಸಕ್ಕೆ ಆರ್.ಎಸ್.ಎಸ್. ಹಿರಿಯ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಇಂದು (ಆ.26) ಭೇಟಿ ನೀಡಿದರು....